ವಿಶ್ವ ಪರಿಸರ ದಿನದ ಪ್ರಯುಕ್ತ ಮೈಸೂರು ನಗರಾಭಿವೃದ್ದಿ
ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಉದ್ಯಾನವನಗಳಲ್ಲಿ ಸಸಿ
ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸನ್ಮಾನ್ಯ ಸಹಕಾರ ಸಚಿವರು
ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ.ಎಸ್.ಟಿ.ಸೋಮಶೇಖರ್ರವರು
ಹಂಚ್ಯಾ ಸಾತಗಳ್ಳಿ ಬಿ ವಲಯ ಬಡಾವಣೆಯ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ
ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.